Haggai 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಇನ್ನು ಸ್ವಲ್ಪ ಸಮಯದಲ್ಲಿ ನಾನು ಭೂಪರಲೋಕಗಳನ್ನು ಅದುರಿಸುವೆನು. ಸಮುದ್ರವನ್ನೂ ಒಣನೆಲವನ್ನೂ ಕಂಪಿಸುವೆನು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಸ್ವಲ್ಪ ಕಾಲದ ಮೇಲೆ ನಾನು ಇನ್ನೊಂದೇ ಸಾರಿ ಆಕಾಶವನ್ನೂ ಭೂವಿುಯನ್ನೂ ಸಮುದ್ರವನ್ನೂ ಒಣನೆಲವನ್ನೂ ಅದುರಿಸಿ
Kannada Bible (KNCL) BSI 2016
“ಸ್ವಲ್ಪಕಾಲದಲ್ಲೇ ಮತ್ತೊಮ್ಮೆ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಮರುಭೂಮಿಯನ್ನೂ ಅದರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.