Haggai 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು! ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Kannada BSI Bible 2016
ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”