Hebrews 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅವುಗಳನ್ನು ಮೇಲಂಗಿಯಂತೆ ಮಡಿಚಿಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
Kannada BSI Bible 2016
ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳನ್ನು ಮೇಲಂಗಿಯಂತೆಯೂ ವಸ್ತ್ರದಂತೆಯೂ ಮಡಿಸುತ್ತೀ, ಮತ್ತು ಅವು ಮಾರ್ಪಡುವವು; ನೀನಾದರೋ ಏಕರೀತಿಯಾಗಿದ್ದೀ. ನಿನ್ನ ವರುಷಗಳು ಮುಗಿದುಹೋಗುವದಿಲ್ಲ ಎಂತಲೂ ಹೇಳುತ್ತಾನೆ.
Kannada Bible (KNCL) BSI 2016
ಮುದುರಿ ಮೂಲೆಗೆಸೆಯುವೆ ಇವನ್ನು ಮೇಲಂಗಿಯಂತೆ. ಬದಲಾಯಿಸುವೆ ನೀ ಅವನ್ನು ಉಡುಪಿನಂತೆ ನೀನಾದರೋ ಬದಲಾಗದೆ ಇರುವೆ ಮೊದಲಿನಂತೆ. ಮುಗಿವೇ ಇರದು ನಿನ್ನ ಬಾಳುವೆಗೆ,” ಎಂದೂ ಸಹ ದೇವರು ನುಡಿದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳನ್ನು ಮೇಲಂಗಿಯಂತೆ ಮಡಿಸುತ್ತಿರಿ, ಅವು ವಸ್ತ್ರದಂತೆ ಮಾರ್ಪಡುತ್ತವೆ. ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ!”