Hebrews 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಯಾವ ದೂತನಿಗೂ ಇದನ್ನೆಂದೂ ಹೇಳಿಲ್ಲ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?
Kannada BSI Bible 2016
ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೇವದೂತರಲ್ಲಿ ಯಾವ ವಿಷಯದಲ್ಲಿಯಾದರೂ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿದ್ದಾನೋ?
Kannada Bible (KNCL) BSI 2016
ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?