Hebrews 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Kannada BSI Bible 2016
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.
Kannada Bible (KNCL) BSI 2016
ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.