Hebrews 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
Kannada BSI Bible 2016
ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರದಲ್ಲಿ ಮುಂದೆ ಬರಬೇಕಾಗಿದ್ದ ಮೇಲುಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ವರುಷ ವರುಷಕ್ಕೆ ಪದೇ ಪದೇ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
Kannada Bible (KNCL) BSI 2016
ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.