Hebrews 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
Kannada BSI Bible 2016
ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು.
Kannada Bible (KNCL) BSI 2016
ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು.