Hebrews 10:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Kannada BSI Bible 2016
ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಈ ಯಾಜಕನು ಪಾಪನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು.
Kannada Bible (KNCL) BSI 2016
ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.