Hebrews 10:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
Kannada BSI Bible 2016
ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು, ಅವರ ಮನಸ್ಸಿನ ಮೇಲೆ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ ಎಂಬದಾಗಿ ಹೇಳಿದ ಮೇಲೆ ಇನ್ನು -
Kannada Bible (KNCL) BSI 2016
“ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು: ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿನಗಳ ತರುವಾಯ, ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಹೃದಯಗಳಲ್ಲಿ ಇಡುವೆನು. ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು, ಎಂದು ಕರ್ತದೇವರು ಹೇಳುತ್ತಾರೆ.”