Hebrews 10:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ನಾವು ಮಹಾ ಪವಿತ್ರಸ್ಥಳವನ್ನು ಪ್ರವೇಶಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಯೇಸು ನಮಗಾಗಿ ತೆರೆದಿರುವ ಹೊಸ ಮಾರ್ಗದ ಮೂಲಕ ನಾವು ಭಯವಿಲ್ಲದೆ ಪ್ರವೇಶಿಸಬಹುದು. ಅದು ಜೀವವುಳ್ಳ ಮಾರ್ಗ. ಕ್ರಿಸ್ತನ ದೇಹವೆಂಬ ತೆರೆಯ ಮೂಲಕ ಈ ಹೊಸ ಮಾರ್ಗವು ನಮ್ಮನ್ನು ಮುಂದಕ್ಕೆ ಕೊಂಡೊಯ್ಯವುದು. (Verses 19-20)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
Kannada BSI Bible 2016
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
Kannada Bible (KNCL) BSI 2016
ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಪ್ರಿಯರೇ, ಯೇಸುವಿನ ರಕ್ತದಿಂದ ಅವರ ದೇಹವೆಂಬ ಪರದೆಯ ಮೂಲಕ ನಮಗೆ ತೆರೆಯಲಾದ