Hebrews 10:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
Kannada BSI Bible 2016
ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದಿದ್ದ ಪಕ್ಷದಲ್ಲಿ ಆ ಯಜ್ಞ ಸಮರ್ಪಣೆಯು ನಿಂತುಹೋಗುತ್ತಿತ್ತಲ್ಲಾ. ಯಾಕಂದರೆ ದೇವಾರಾಧನೆ ಮಾಡುವವರು ಒಂದೇ ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಪಾಪವುಂಟೆಂದು ಅವರ ಮನಸ್ಸು ಇನ್ನೂ ಸಾಕ್ಷಿಕೊಡುವದು ಹೇಗೆ?
Kannada Bible (KNCL) BSI 2016
ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಪಾಪದಿಂದ ಶುದ್ಧೀಕರಣ ಹೊಂದಿದ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.