Hebrews 10:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
Kannada BSI Bible 2016
ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಯಾಗಿ ಕೂಡಿಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿಸೋಣ. ಕರ್ತನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
Kannada Bible (KNCL) BSI 2016
ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.