Hebrews 10:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
Kannada BSI Bible 2016
ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯ ವಿಧಿಗಳನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳ ಮಾತಿನ ಮೇಲೆ ಕನಿಕರವಿಲ್ಲದೆ ಮರಣದಂಡನೆ ಆಗುತ್ತದಷ್ಟೆ.
Kannada Bible (KNCL) BSI 2016
ಮೋಶೆಯ ಆಜ್ಞಾವಿಧಿಗಳನ್ನು ಉಲ್ಲಂಘಿಸಿದವನು, ಇಬ್ಬರು ಅಥವಾ ಮೂವರು ಸಾಕ್ಷಿಗಳು ನೀಡುವ ಸಾಕ್ಷ್ಯದ ಆಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆಗೆ ಗುರಿ ಆಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ನಿಯಮವನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕರುಣೆಯಿಲ್ಲದೆ ಮರಣದಂಡನೆಯಾಗುತ್ತಿತ್ತು.