Hebrews 10:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
Kannada BSI Bible 2016
ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವು ಸಾರಿ ನೀವು ನಿಂದೆಗಳನ್ನೂ ಸಂಕಟಗಳನ್ನೂ ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಸೇರಿದವರಾಗಿದ್ದು ಕಷ್ಟಾನುಭವಿಗಳಾದಿರಿ.
Kannada Bible (KNCL) BSI 2016
ಕೆಲವೊಮ್ಮೆ ಬಹಿರಂಗವಾಗಿ ಹಿಂಸೆಬಾಧೆಗಳಿಗೂ ನಿಂದೆ ಅವಮಾನಗಳಿಗೂ ಗುರಿಯಾದಿರಿ; ಮತ್ತೆ ಕೆಲವೊಮ್ಮೆ ನಿಮ್ಮಂತೆ ಸಂಕಟಪಡುವವರ ಸಂಗಡ ಸಹಭಾಗಿಗಳಾದಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವು ಸಾರಿ ನೀವು ನಿಂದೆಗಳನ್ನೂ ಉಪದ್ರವಗಳನ್ನೂ ಅನುಭವಿಸಿ ಬಹಿರಂಗ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸುವವರ ಭಾಗಿಗಳಾದಿರಿ.