Hebrews 10:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
Kannada BSI Bible 2016
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.
Kannada Bible (KNCL) BSI 2016
ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.