Hebrews 10:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
Kannada BSI Bible 2016
ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರದ ಪ್ರಕಾರ ಸಮರ್ಪಣೆಯಾಗುತ್ತಾ ಬರುವ ಯಜ್ಞನೈವೇದ್ಯಗಳೂ ಸರ್ವಾಂಗಹೋಮಗಳೂ ದೋಷಪರಿಹಾರಕಯಜ್ಞಗಳೂ ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವದಿಲ್ಲ ಎಂದು ಮೇಲೆ ಹೇಳಿದ ತರುವಾಯ -
Kannada Bible (KNCL) BSI 2016
ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದ್ದುವಾದರೂ “ಬಲಿಯರ್ಪಣೆಗಳು, ಕಾಣಿಕೆಗಳು, ದಹನಬಲಿಗಳು ಮತ್ತು ಪಾಪಪರಿಹಾರಕಬಲಿಗಳು ನಿಮಗೆ ಬೇಡವಾದವು; ಇವು ಯಾವುವು ನಿಮಗೆ ತರಲಿಲ್ಲ ತೃಪ್ತಿಯನು,” ಎಂದು ಮೊದಲು ಹೇಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ನಿಯಮದ ಪ್ರಕಾರವಾಗಿ ಅರ್ಪಿಸಲಾಗುತ್ತಿದ್ದಂತೆಯೇ, “ಯಜ್ಞವೂ ಅರ್ಪಣೆಯೂ ದಹನಬಲಿಗಳೂ ಪಾಪ ಪರಿಹಾರದ ಬಲಿಯೂ ನಿಮಗೆ ಇಷ್ಟವಾಗಿರಲಿಲ್ಲ. ಅವುಗಳಲ್ಲಿ ನಿಮಗೆ ಸಂತೋಷವಿರಲಿಲ್ಲ,” ಎಂದು ಮೊದಲು ಅವರು ಹೇಳಿ,