Hebrews 10:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಕ್ರಿಸ್ತನು ಹೇಳಿದ್ದೇನೆಂದರೆ, “ದೇವರೇ, ನಾನು ಇಲ್ಲಿದ್ದೇನೆ. ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ.” ಆದ್ದರಿಂದ ದೇವರು ಯಜ್ಞಗಳ ಮೊದಲನೆ ವ್ಯವಸ್ಥೆಯನ್ನು ಕೊನೆಗೊಳಿಸಿ, ತನ್ನ ಹೊಸ ಮಾರ್ಗವನ್ನು ಆರಂಭಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
Kannada BSI Bible 2016
ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
Kannada Bible (KNCL) BSI 2016
ಅನಂತರ, “ಇಗೋ, ನಾ ಬಂದೆ ನಿಮ್ಮ ಚಿತ್ತವನು ನೆರವೇರಿಸಲೆಂದೇ,” ಎನ್ನುತ್ತಾರೆ. ಹೀಗೆ ಹೊಸದನ್ನು ಸ್ಥಾಪಿಸಲು ಹಳೆಯದನ್ನು ರದ್ದುಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ, “ಇಗೋ, ದೇವರೇ, ನಿಮ್ಮ ಚಿತ್ತವನ್ನು ನೆರವೇರಿಸಲು ಬಂದಿದ್ದೇನೆ!” ಎಂದು ಹೇಳಿದ್ದಾರೆ. ಹೀಗೆ ಅವರು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ರದ್ದು ಮಾಡಿದ್ದಾರೆ.