Hebrews 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
Kannada BSI Bible 2016
ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
Kannada Bible (KNCL) BSI 2016
ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು.