Hebrews 11:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಿದನು. ಇಸಾಕನನ್ನು ಯಜ್ಞವಾಗಿ ಸಮರ್ಪಿಸೆಂದು ದೇವರು ಅವನಿಗೆ ಹೇಳಿದನು. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ ವಿಧೇಯನಾದನು. ದೇವರು ಅವನಿಗೆ, “ನಿನ್ನ ಸಂತತಿಗಳವರು ಇಸಾಕನ ಮೂಲಕ ಬರುವರು” ಎಂದು ಮೊದಲೇ ವಾಗ್ದಾನ ಮಾಡಿದ್ದನು. ಆದರೂ ತನ್ನ ಒಬ್ಬನೇ ಮಗನನ್ನು ಅರ್ಪಿಸಲು ಅವನು ಸಿದ್ಧನಾಗಿದ್ದನು. (Verses 17-18)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.
Kannada BSI Bible 2016
ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ಪರಿಶೋಧಿತನಾಗಿ ನಂಬಿಕೆಯಿಂದಲೇ ಇಸಾಕನನ್ನು ಸಮರ್ಪಿಸಿದನು. ಇಸಾಕನು ಅವನ ಏಕಪುತ್ರನಾಗಿದ್ದರೂ ಮತ್ತು ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರೆಂದು ದೇವರು ಅವನಿಗೆ ಹೇಳಿದ್ದರೂ ಆ ವಾಗ್ದಾನಗಳನ್ನು ಹೊಂದಿದ ಅವನು ಆ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕಿದ್ದನು.
Kannada Bible (KNCL) BSI 2016
ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.