Hebrews 11:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.
Kannada BSI Bible 2016
ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.
Kannada Bible (KNCL) BSI 2016
ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.