Hebrews 11:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
Kannada BSI Bible 2016
ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ತಾನು ಸಾಯುತ್ತಿರುವಾಗ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು; ತನ್ನ ಕೋಲಿನ ಮೇಲೆ ಬಾಗಿಕೊಂಡು ದೇವರಿಗೆ ನಮಸ್ಕಾರಮಾಡಿದನು.
Kannada Bible (KNCL) BSI 2016
ವಿಶ್ವಾಸದಿಂದಲೇ ಯಕೋಬನು, ತಾನು ಸಾಯುವ ಸಮಯದಲ್ಲಿ ಜೋಸೆಫನ ಪ್ರತಿಯೊಬ್ಬ ಮಗನನ್ನೂ ಆಶೀರ್ವದಿಸಿದನು; ಊರುಗೋಲಿನ ಮೇಲೆ ಬಾಗಿಕೊಂಡೇ ದೇವರನ್ನು ಆರಾಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಿಂದಲೇ ಯಾಕೋಬನು ಮರಣ ಹೊಂದುವ ಸಮಯದಲ್ಲಿ ಯೋಸೇಫನ ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.