Hebrews 11:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.
Kannada BSI Bible 2016
ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ತೀರಿಹೋಗುವಾಗ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತಾಡಿ ತನ್ನ ಶವವನ್ನು ತಕ್ಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆಕೊಟ್ಟನು.
Kannada Bible (KNCL) BSI 2016
ವಿಶ್ವಾಸದಿಂದಲೇ ಜೋಸೆಫನು, ತಾನು ಸಾಯುವ ಗಳಿಗೆಯು ಸಮೀಪಿಸಿದಾಗ, ಇಸ್ರಯೇಲಿನ ಜನರು ಈಜಿಪ್ಟಿನಿಂದ ಹೊರಬರುವುದನ್ನು ಸೂಚಿಸಿದನು. ಅಲ್ಲದೆ, ತನ್ನ ಶವಸಂಸ್ಕಾರದ ಬಗ್ಗೆ ಆದೇಶ ನೀಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಿಂದಲೇ ಯೋಸೇಫನು ಸಾಯುವಾಗ ಇಸ್ರಾಯೇಲರು ಹೊರಡುವುದನ್ನು ಕುರಿತು ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.