Hebrews 11:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
Kannada BSI Bible 2016
ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಹುಟ್ಟಿದಾಗ ಅವನ ತಂದೆ ತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
Kannada Bible (KNCL) BSI 2016
ವಿಶ್ವಾಸವಿದ್ದುದರಿಂದಲೇ ಮೋಶೆ ಹುಟ್ಟಿದಾಗ ಆ ಮಗುವಿನ ಸೌಂದರ್ಯವನ್ನು ಕಂಡು, ತಂದೆತಾಯಿಗಳು ರಾಜಾಜ್ಞೆಗೆ ಅಂಜದೆ, ಮೂರು ತಿಂಗಳವರೆಗೆ ಅದನ್ನು ಬಚ್ಚಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಿಂದಲೇ ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರುವುದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.