Hebrews 11:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಆ ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.
Kannada BSI Bible 2016
ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಲ್ಪಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವರ ಜನರೊಂದಿಗೆ ಕಷ್ಟವನ್ನನುಭವಿಸುವದೇ ಒಳ್ಳೇದೆಂದು ತೀರ್ಮಾನಿಸಿಕೊಂಡನು.
Kannada Bible (KNCL) BSI 2016
ಕ್ಷಣಿಕ ಪಾಪಭೋಗಗಳನ್ನು ಸವಿಯುವುದಕ್ಕಿಂತಲೂ ದೇವಜನರೊಂದಿಗೆ ಕಷ್ಟಕ್ಕೆ ಈಡಾಗುವುದೇ ಲೇಸೆಂದು ಆತನು ತೀರ್ಮಾನಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟ ಅನುಭವಿಸುವುದನ್ನೇ ಆರಿಸಿಕೊಂಡನು.