Hebrews 11:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.
Kannada BSI Bible 2016
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.
Kannada Bible (KNCL) BSI 2016
ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.