Hebrews 11:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
Kannada BSI Bible 2016
ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
Kannada Bible (KNCL) BSI 2016
ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.