Hebrews 11:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.
Kannada BSI Bible 2016
ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೊಚ್ಚಲಮಕ್ಕಳನ್ನು ಸಂಹರಿಸುವವನು ಇಸ್ರಾಯೇಲ್ಯರನ್ನು ಮುಟ್ಟದಂತೆ ಅವನು ಪಸ್ಕವೆಂಬ ಊಟವನ್ನೂ ರಕ್ತಪ್ರೋಕ್ಷಣಾಚಾರವನ್ನೂ ನೇವಿುಸಿದ್ದು ನಂಬಿಕೆಯಿಂದಲೇ.
Kannada Bible (KNCL) BSI 2016
ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೊಚ್ಚಲ ಮಕ್ಕಳನ್ನು ಸಂಹರಿಸುವ ದೂತನು ಇಸ್ರಾಯೇಲರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ ಮೋಶೆ ನಂಬಿಕೆಯಿಂದಲೇ ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದನು.