Hebrews 11:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.
Kannada BSI Bible 2016
ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
Kannada Bible (KNCL) BSI 2016
ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಿಂದಲೇ ಇಸ್ರಾಯೇಲರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿ ಮುಳುಗಿ ಹೋದರು.