Hebrews 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
Kannada BSI Bible 2016
ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಂಬಿಕೆಯಿಂದಲೇ ನಾವು ತಿಳಿದುಕೊಂಡು ಕಾಣಿಸುವ ಈ ಜಗತ್ತು ದೃಶ್ಯ ವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
Kannada Bible (KNCL) BSI 2016
ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ.