Hebrews 11:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಜನರ ನಂಬಿಕೆಯಿಂದಲೇ ಜೆರಿಕೊ ಪಟ್ಟಣದ ಗೋಡೆಗಳ ಸುತ್ತಲೂ ಏಳು ದಿನಗಳವರೆಗೆ ಸುತ್ತಿದಾಗ ಅವು ಬಿದ್ದುಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
Kannada BSI Bible 2016
ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಕೆಯಿಂದಲೇ ಅವರು ಏಳು ದಿವಸಗಳ ತನಕ ಎರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
Kannada Bible (KNCL) BSI 2016
ಇಸ್ರಯೇಲರು ಏಳು ದಿನಗಳವರೆಗೆ ಜೆರಿಕೊ ಪಟ್ಟಣದ ಕೋಟೆಯನ್ನು ಪ್ರದಕ್ಷಿಣೆಮಾಡಿ ಬಂದ ನಂತರ ಅವು ತಮ್ಮಷ್ಟಕ್ಕೆ ತಾವೇ ಕುಸಿದು ಬಿದ್ದುದಕ್ಕೆ ಕಾರಣ ಆ ವಿಶ್ವಾಸವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ, ಅವು ಬಿದ್ದು ಹೋದದ್ದು ನಂಬಿಕೆಯಿಂದಲೇ.