Hebrews 11:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,
Kannada BSI Bible 2016
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;
Kannada Bible (KNCL) BSI 2016
ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,