Hebrews 11:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.
Kannada BSI Bible 2016
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
Kannada Bible (KNCL) BSI 2016
ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,