Hebrews 11:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರೆಲ್ಲರೂ ತಮ್ಮ ನಂಬಿಕೆಯ ವಿಷಯದಲ್ಲಿ ಪ್ರಸಿದ್ಧರಾಗಿದ್ದರು. ಆದರೆ ದೇವರ ದೊಡ್ಡ ವಾಗ್ದಾನವನ್ನು ಇವರಲ್ಲಿ ಯಾರೂ ಹೊಂದಿಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.
Kannada BSI Bible 2016
ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಹೆಸರನ್ನು ಸಂಪಾದಿಸಿಕೊಂಡಿದ್ದರೂ ವಾಗ್ದಾನದ ಫಲವನ್ನು ಹೊಂದಲಿಲ್ಲ;
Kannada Bible (KNCL) BSI 2016
ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರೆಲ್ಲರೂ ತಮ್ಮ ನಂಬಿಕೆಯ ಮೂಲಕ ಒಳ್ಳೆಯ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವಾದದ್ದನ್ನು ಹೊಂದಲಿಲ್ಲ.