Hebrews 11:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನಮಗೆ ಶ್ರೇಷ್ಠವಾದದ್ದನ್ನು ಕೊಡಲು ಯೋಜನೆ ಮಾಡಿದನು. ನಮ್ಮೊಡನೆ ಮಾತ್ರ ಅವರು ಪರಿಪೂರ್ಣರಾಗಬೇಕೆಂಬುದೇ ಆ ಯೋಜನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.
Kannada BSI Bible 2016
ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ಸಂಕಲ್ಪಿಸಿದನು.
Kannada Bible (KNCL) BSI 2016
ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಮ್ಮೊಂದಿಗೆ ಅವರು ಪರಿಪೂರ್ಣರಾಗಬೇಕೆಂದು ದೇವರು ನಮಗೋಸ್ಕರ ಉತ್ತಮವಾದದ್ದನ್ನು ಸಂಕಲ್ಪಿಸಿದ್ದಾರೆ.