Hebrews 11:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.
Kannada BSI Bible 2016
ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹನೋಕನು ಮರಣವನ್ನು ಅನುಭವಿಸದೆ ಒಯ್ಯಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರಿಗೆ ಮೆಚ್ಚಿಕೆಯಾದವನಾಗಿದ್ದನೆಂದು ಸಾಕ್ಷಿ ಉಂಟು.
Kannada Bible (KNCL) BSI 2016
ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಿಂದಲೇ ಹನೋಕನು ಮರಣ ಹೊಂದದೆ, ಒಯ್ಯಲಾದನು. “ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.” ಅವನು ಒಯ್ಯಲಾಗುವುದಕ್ಕಿಂತ ಮುಂಚೆ ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿಹೊಂದಿದನು.