Hebrews 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
Kannada BSI Bible 2016
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
Kannada Bible (KNCL) BSI 2016
ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.