Hebrews 12:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ಆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
Kannada BSI Bible 2016
ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋಚದೆ ದುಃಖಕರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ನೀತಿಯೆಂಬ ಫಲವನ್ನು ಕೊಟ್ಟು ಮನಸ್ಸಿಗೆ ಸಮಾಧಾನವನ್ನು ಉಂಟುಮಾಡುತ್ತದೆ.
Kannada Bible (KNCL) BSI 2016
ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ಶಿಕ್ಷೆಯಾದರೂ ಆ ಸಮಯಕ್ಕೆ ಸಂತೋಷಕರವಾಗಿ ತೋಚದೆ, ದುಃಖಕರವಾಗಿ ತೋಚುತ್ತದೆ. ತರುವಾಯ, ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನವುಳ್ಳ ನೀತಿಯ ಫಲವನ್ನು ಕೊಡುತ್ತದೆ.