Hebrews 12:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮಲ್ಲಿ ಯಾರೂ ಲೈಂಗಿಕಪಾಪ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
Kannada BSI Bible 2016
ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು;
Kannada Bible (KNCL) BSI 2016
ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.