Hebrews 12:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗೇ ತಿಳಿದಿರುವಂತೆ, ಆ ಬಳಿಕ ಅವನು ತನ್ನ ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳಲು ಬಹಳವಾಗಿ ಗೋಳಾಡಿದನು. ಏಸಾವನು ತಾನು ಮಾಡಿದ್ದನ್ನು ಬದಲಾಯಿಸಲಾಗದ್ದರಿಂದ ತಂದೆಯ ಆಶೀರ್ವಾದವು ಅವನಿಗೆ ದೊರೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.
Kannada BSI Bible 2016
ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ನಡೆದದ್ದನ್ನು ಇಲ್ಲದ ಹಾಗೆ ಮಾಡುವದಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ಬಲ್ಲಿರಿ.
Kannada Bible (KNCL) BSI 2016
ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವನು ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಬಯಸಿ, ಕಣ್ಣೀರನ್ನು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲಾದವನೆಂದು ನೀವು ಬಲ್ಲಿರಿ.