Hebrews 12:2 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.
Kannada BSI Bible 2016
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.
Kannada Bible (KNCL) BSI 2016
ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.