Hebrews 12:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಬೆಟ್ಟವನ್ನು ಮುಟ್ಟುವ ಏನನ್ನಾದರೂ ಸರಿ, ಅದು ಒಂದು ಪ್ರಾಣಿಯಾಗಿದ್ದರೂ ಅದನ್ನು ಕಲ್ಲೆಸೆದು ಕೊಂದುಹಾಕಿರಿ” ಎಂಬ ಆಜ್ಞೆಯನ್ನು ಕೇಳಲು ಅವರು ಇಷ್ಟಪಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.
Kannada BSI Bible 2016
(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ - ಒಂದು ಮೃಗವಾದರೂ ಬೆಟ್ಟಕ್ಕೆ ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ ವಿಧಿಯನ್ನು ತಾಳಲಾರದೆ ಇದ್ದರು.
Kannada Bible (KNCL) BSI 2016
ಏಕೆಂದರೆ, ಈ ಬೆಟ್ಟವನ್ನು ಮುಟ್ಟುವ ಯಾರೇ ಆಗಲಿ, ಯಾವ ಪ್ರಾಣಿಯೇ ಆಗಲಿ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಎಂಬ ಆಜ್ಞೆಯನ್ನು ಅವರು ಸಹಿಸಲಾರದೆಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ಯಾವ ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕು,” ಎಂದು ಆಜ್ಞಾಪಿಸಿದ್ದನ್ನು ಅವರು ತಾಳಲಾರದೆ ಹೋದರು.