Hebrews 12:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” ಎಂದು ವಾಗ್ದಾನ ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.
Kannada BSI Bible 2016
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಧ್ವನಿಯು ಆ ಕಾಲದಲ್ಲಿ ಭೂವಿುಯನ್ನು ಕದಲಿಸಿತು; ಈಗಲಾದರೋ ಆತನು - ಇನ್ನೊಂದೇ ಸಾರಿ ನಾನು ಭೂವಿುಯನ್ನು ಮಾತ್ರವಲ್ಲದೆ ಪರಲೋಕವನ್ನೂ ನಡುಗಿಸುವೆನೆಂದು ವಾಗ್ದಾನಮಾಡಿದ್ದಾನೆ.
Kannada Bible (KNCL) BSI 2016
ಅಂದು ದೇವರ ಧ್ವನಿಗೆ ಭೂಮಿಯು ನಡುಗಿತು. ಇಂದಾದರೋ, “ಇನ್ನೂ ಒಂದು ಸಾರಿ ನಾನು ಭೂಮಿಯನ್ನಷ್ಟೇ ಅಲ್ಲ, ಆಕಾಶವನ್ನೂ ನಡುಗಿಸುತ್ತೇನೆ,” ಎಂದು ಪ್ರತಿಜ್ಞೆಮಾಡಿರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ದೇವರ ಧ್ವನಿಯು ಭೂಮಿಯನ್ನು ಕದಲಿಸಿತು. ಈಗಲಾದರೋ, “ಇನ್ನೊಂದು ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ!” ಎಂದು ದೇವರು ವಾಗ್ದಾನಮಾಡಿದ್ದಾರೆ.