Hebrews 12:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
Kannada BSI Bible 2016
ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೊಂದೇ ಸಾರಿ ಎಂಬೀ ಮಾತನ್ನು ಯೋಚಿಸಿದರೆ ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡಬೇಕೆಂಬದು ಸ್ಪಷ್ಟವಾಗುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
Kannada Bible (KNCL) BSI 2016
“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇನ್ನೂ ಒಂದು ಸಾರಿ,” ಎಂಬ ಮಾತು ನಿರ್ಮಿತವಾಗಿರುವ ಕದಲುವ ವಸ್ತುಗಳು ತೆಗೆದುಹಾಕಲಾಗುವುದು ಎಂದೂ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿರುವುದು ಎಂಬುದನ್ನು ಸೂಚಿಸುತ್ತದೆ.