Hebrews 12:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
Kannada BSI Bible 2016
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಆತನನ್ನು ಆಲೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
Kannada Bible (KNCL) BSI 2016
ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.