Hebrews 12:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”
Kannada BSI Bible 2016
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
Kannada BSI JV (ಕನ್ನಡ ಸತ್ಯವೇದವು J.V. (BSI))
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ - ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;
Kannada Bible (KNCL) BSI 2016
ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.