Hebrews 13:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
Kannada BSI Bible 2016
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.
Kannada Bible (KNCL) BSI 2016
ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.