Hebrews 13:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
Kannada BSI Bible 2016
ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
Kannada Bible (KNCL) BSI 2016
ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.