Hebrews 13:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್. (Verses 20-21)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
Kannada BSI Bible 2016
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,
Kannada Bible (KNCL) BSI 2016
ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.