Hebrews 13:21 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 20
Kannada BSI Bible 2016
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.
Kannada Bible (KNCL) BSI 2016
ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.