Hebrews 13:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
Kannada BSI Bible 2016
ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;
Kannada Bible (KNCL) BSI 2016
ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.